
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಸೋಮವಾರ ಆಗಮಿಸಲಿದ್ದಾರೆ.
ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿ ಜನಪ್ರಿಯಗಳಿಸಿದ ನಟ ಸುದೀಪ್ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ.
ನಾಳೆ ಸಂಜೆ: 5 ಗಂಟೆಗೆ ಖಾಸಭಾಗ ಬಸವೇಶ್ವರ ಸರ್ಕಲ್ ದಿಂದ ಪ್ರಚಾರ ಪಾದಯಾತ್ರೆ ಪ್ರಾರಂಭವಾಗಿ ವಡಗಾವಿ, ಖಾಸಭಾಗದ ವಿವಿಧ ಬಡಾವಣೆಗಳಲ್ಲಿ ಭರ್ಜರಿ ಚುನಾವಣಾ ಪ್ರಚಾರ ನೆಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ