Film & Entertainment

*ಅತ್ಯುತ್ತಮ ನಟ ಪ್ರಶಸ್ತಿ ನಿರಾಕರಿಸಿದ ಕಿಚ್ಚ ಸುದೀಪ್*

ಪ್ರಗತಿವಾಹಿನಿ ಸುದ್ದಿ: ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್, ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

2019ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ನಟ ಸುದೀಪ್ ಅವರಿಗೆ ಘೋಷಿಸಲಾಗಿತ್ತು. ಆದರೆ ನಟ ಸುದೀಪ್, ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

ಈ ಬಗ್ಗೆ ಸ್ವತಃ ಸುದೀಪ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಸರ್ಕಾರ, ಜ್ಯೂರಿ ಸದಸ್ಯರಿಗೆ ಧನ್ಯವಾದಗಳು. ಬೆಸ್ಟ್ ಆಕ್ಟರ್ ಆಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಚಿರಋಣಿ. 7 ವರ್ಷಗಳಿಂದ ನಾನು ಪ್ರಶಸ್ತಿ ಸ್ವೀಕರಿಸುವುದನ್ನು ನಾನು ನಿಲ್ಲಿಸಿದ್ದೇನೆ. ನಾನು ಪ್ರಶಸ್ತಿ ತೆಗೆದುಕೊಳ್ಳದಿರಲು ನಾನಾ ಕಾರಣಗಳಿವೆ. ನನಗಿಂತ ಅತ್ಯುತ್ತಮವಾಗಿ ಅಭಿನಯಿಸುವ ನಟ-ನಟಿಯರಿದ್ದಾರೆ. ಅವರಿಗೆ ಈ ರೀತಿ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಿ. ಹೊಸಬರಿಗೆ ಪ್ರಶಸ್ತಿ ಕೊಟ್ಟಷ್ಟು ನನಗೆ ತೃಪ್ತಿ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button