*ಮಹಿಳಾ ದಿನಾಚರಣೆಯಂದೇ ಘೋಷಣೆ: ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ*

ಪ್ರಗತಿವಾಹಿನಿ ಸುದ್ದಿ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ವಿಶ್ವ ಮಹಿಳಾ ದಿನಾಚರಣೆಯ ದಿನದಂದೇ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ. ನಾರಿಶಕ್ತಿ ಕಲ್ಪನೆ ಅಡಿಯಲ್ಲಿ ಇನ್ಫೋಸಿಸ್ ಮುಖ್ಯಸ್ಥೆ ಕರ್ನಾಟಕದ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ಕಳುಹಿಸಿಕೊಡಲು ನಮಗೆ ಸಂತಸವಾಗುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ. *ಸ್ವಾರ್ಥ‌ರಹಿತ ರಾಜಕಾರಣ ಮುಖ್ಯ: ಲಕ್ಷ್ಮೀ ಹೆಬ್ಬಾಳಕರ್*