Kannada NewsKarnataka NewsLatestPolitics

*ಪ್ರದೀಪ್ ಈಶ್ವರ್ ಹೇಳಿಕೆಗೆ ಸುಧಾಕರ್ ಮೌನ*: *ಸಮಯ ಬಂದಾಗ ಉತ್ತರ ಎಂದ ಶಾಸಕ*

ಪ್ರಗತಿವಾಹಿನಿ ಸುದ್ದಿ: ಶಾಸಕ ಪ್ರದೀಪ್ ಈಶ್ವರ್ ಅವರ ಹೇಳಿಕೆಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳ ಕುರಿತು ಸದ್ಯ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಶಾಸಕ ಡಾ. ಎಂ.ಸಿ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್, ಪಕ್ಷದ ವರಿಷ್ಠರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಸದ್ಯ ಮೌನವಾಗಿರುವುದು ಪಕ್ಷದ ಶಿಸ್ತಿನ ಭಾಗ ಎಂದು ಹೇಳಿದ ಸುಧಾಕರ್, ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿರುವುದಾಗಿ ಸ್ಪಷ್ಟಪಡಿಸಿದರು. ಇದೇ ವೇಳೆ, ಸಂಸದ ಡಾ. ಕೆ. ಸುಧಾಕರ್ ಅವರು “ಗುರು-ಶಿಷ್ಯರಿಬ್ಬರೂ ಸರಿಯಿಲ್ಲ” ಎಂಬ ಟೀಕೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಸಮಯ ಬಂದಾಗ ಉತ್ತರ ನೀಡುತ್ತೇನೆ” ಎಂದು ಹೇಳುವ ಮೂಲಕ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button