Kannada NewsKarnataka NewsLatest

*ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗ(KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಹಾಲಿ ಸದಸ್ಯೆ ಶಾಂತಾ ಹೊಸಮನಿ ಸೇರಿದಂತೆ ಹಲವರ ಮನೆ ಹಾಗೂ ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಇದರ ಬೆನ್ನಲ್ಲೇ ಇತ್ತ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ದಾಳಿ ನಡೆಸಲಾಗಿದೆ.

ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ನಿವಾಸದ ಮೇಲೆ ದಾಳಿ ನಡೆದಿದ್ದು, ಮನೆಗೆ ಬೀಗ ಹಾಕಿರುವುದರಿಂದ ಕೀ ಮೇಕರ್​​​​ನನ್ನು ಕರೆಯಿಸಿ ಬಾಗಿಲು ಓಪನ್ ಮಾಡಿಸಿ ಅಧಿಕಾರಿಗಳು ಮನೆ ಒಳಗೆ ಪ್ರವೇಶಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಕೆಪಿಎಸ್ ಸಿ ಅಕ್ರಮ ಪ್ರಕರಣದಲ್ಲಿ ಇಡಿ ದಾಳಿಗೆ ಹೆದರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಅವರ ಮನೆ ಮೇಲೆ ಇಡಿ ಅಧಿಕಾಳು ದಾಳಿ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button