ಪ್ರಗತಿವಾಹಿನಿ ಸುದ್ದಿ, ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಹತ್ತಿರದ ಸತೀಶ ಶುಗರ್ಸ್ ಸಕ್ಕರೆ ಕಾರ್ಖಾನೆಯ 2022-23ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ರಮಕ್ಕೆ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ಚಾಲನೆ ನೀಡಿದರು.
ಸತೀಶ ಶುಗರ್ಸ್ ಸಂಸ್ಥೆಯ ಚೇರಮನ್ ಮತ್ತು ಮುಖ್ಯ ಹಣಕಾಸು ಅಧಿಕಾರಿ ಪ್ರದೀಪಕುಮಾರ ಇಂಡಿ ಮಾತನಾಡಿ, 2022-23 ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಈಗಾಗಲೇ 27 ಸಾವಿರ ರೂ. ದರ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಎರಡನೇ ಕಂತಿನ ಹಣವನ್ನು ಘೋಷಣೆ ಮಾಡಲಾಗುವುದು ಎಂದರು.
ಪ್ರಸಕ್ತ 2022- 23 ನೇ ಸಾಲಿನ ಹಂಗಾಮಿನ ಮೊದಲ ದಿನವೇ ಉತ್ಸಾಹದಿಂದ 800 ವಾಹನಗಳಲ್ಲಿ ಸುಮಾರು 15 ಸಾವಿರ ಮೆಟ್ರಿಕ್ ಟನ್ ಕಬ್ಬನ್ನು ಪೂರೈಸುವ ಮೂಲಕ ರೈತರು ಕಾರ್ಖಾನೆಯ ಮೇಲಿನ ಭರವಸೆ ವ್ಯಕ್ತಪಡಿಸಿದ್ದಾರೆ. ಕಬ್ಬು ಪೂರೈಸಿದ ರೈತರಿಗೆ ವಿಳಂಬ ಮಾಡದೆ ಕಬ್ಬಿನ ಬಿಲ್ಲನ್ನು ಪಾವತಿ ಮಾಡುತ್ತಿದ್ದು, ಪ್ರಸಕ್ತ ಹಂಗಾಮಿನಲ್ಲಿಯೂ ಸಹ ಕಬ್ಬು ಪೂರೈಸಿದ ರೈತರ ಬ್ಯಾಂಕ್ ಖಾತೆಗಳಿಗೆ ಸಮಯಾನುಸಾರ ಜಮೆ ಮಾಡಲಾಗುವುದು ಎಂದರು.
ಕಾರ್ಖಾನೆಗೆ ಕಬ್ಬು ಪೂರೈಸುವ ಸಮಸ್ತ ರೈತರು ಪ್ರಸಕ್ತ ಹಂಗಾಮಿನಲ್ಲಿ ಉತ್ತಮ ಗುಣಮಟ್ಟದ ಕಬ್ಬನ್ನು ಪೂರೈಸಿ ಕಾರ್ಖಾನೆಯ ಪ್ರಗತಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಗತಿಪರ ರೈತರಾದ ಭೀಮಪ್ಪಾ ರಡ್ಡಿ, ಮಲ್ಲಿಕಾರ್ಜುನ ಕಬ್ಬೂರ, ಅರ್ಜುನ ನಾಯಿಕವಾಡಿ, ಅಶೋಕ ಮಳಲಿ, ರವಿ ಸಣ್ಣಕ್ಕಿ, ಅಜ್ಜಪ್ಪಾ ಗಿರಡ್ಡಿ, ಮಹಾದೇವಪ್ಪಾ ಪತ್ತಾರ, ವಾಸಪ್ಪಾ ಪಂಡ್ರೋಳಿ, ಕೆಂಚಪ್ಪಾ ಶಿಂತ್ರಿ, ವಿಠ್ಠಲ ಹೊಸುರ, ಆಡಳಿತ ಮಂಡಳಿಯ ಹಿರಿಯ ಉಪಾಧ್ಯಕ್ಷ ಎಲ್.ಆರ್.ಕಾರಗಿ, ಪಿ.ಡಿ. ಹಿರೇಮಠ ಹಾಗೂ ಉಪಾಧ್ಯಕ್ಷರಾ ವಿ.ಎಂ.ತಳವಾರ, ಎ.ಎಸ್.ರಾಣಾ, ಡಿ.ಆರ್.ಪವಾರ ಮತ್ತು ಕಾರ್ಖಾನೆಯ ಕಾರ್ಮಿಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಟಿಳಕವಾಡಿ ರೈಲ್ವೆ ಗೇಟ್ ಮೇಲ್ಸೇತುವೆ ಉದ್ಘಾಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ