ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, 60 ಲಕ್ಷ ಟನ್ ಸಕ್ಕರೆಯನ್ನು ರೈತರಿಂದ ಖರೀದಿಸಿ ವಿದೇಶಗಳಿಗೆ ರಫ್ತು ಮಾಡಲು ನಿರ್ಧರಿಸಲಾಗಿದೆ. ಹೀಗೆ ಬಂದ ಹಣವನ್ನು ರೈತರ ಖಾತೆಗೆ ಜಮಾವಣೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
3,500 ಕೋಟಿ ಸಬ್ಸಿಡಿಯಿಂದ ದೇಶದ 5 ಕೋಟಿ ಕಬ್ಬು ಬೆಳೆಗಾರರಿಗೆ ಹಾಗೂ 5 ಲಕ್ಷ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ