*ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ನಾಳೆಯಿಂದ ಸಕ್ಕರೆ ಕಾರ್ಖಾನೆ ಆರಂಭ: ಚುನಪ್ಪ ಪೂಜಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಘೋಷಿಸಿದ್ದಾರೆ. ಪೊಲೀಸರ ವಶದಿಂದ ಬಿಡುಗಡೆಯಾದ ಬಳಿಕ ಬೆಳಗಾವಿಯ ಪೊಲೀಸ್ ಕ್ವಾರ್ಟರ್ಸ್‌ನ ವೀರಭದ್ರ ದೇವಸ್ಥಾನದಲ್ಲಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳು ನಾಳೆಯಿಂದ ಕಾರ್ಯಾರಂಭ ಮಾಡಲಿದ್ದು, ಯಾವುದೇ ರೈತರು ಕಾರ್ಖಾನೆಗಳ ಆರಂಭಕ್ಕೆ ಅಡ್ಡಿಪಡಿಸಬಾರದು ಎಂದು ಮನವಿ ಮಾಡಿದರು. ಗುರ್ಲಾಪುರದಲ್ಲಿಯೂ ಹೋರಾಟವನ್ನು ಹಿಂಪಡೆಯಲಾಗಿದ್ದು, ನಾಳೆ ಅಲ್ಲಿ ರೈತರೆಲ್ಲರೂ ಸೇರಿ ಸಭೆ ನಡೆಸಲಿದ್ದಾರೆ … Continue reading *ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ನಾಳೆಯಿಂದ ಸಕ್ಕರೆ ಕಾರ್ಖಾನೆ ಆರಂಭ: ಚುನಪ್ಪ ಪೂಜಾರಿ*