
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಗುಂಡಾಟ್ ನಲ್ಲಿ ನಡೆದಿದೆ.
ಲಾರಿ ಚಾಲಕ ಚಿನ್ನು ಹಾಗೂ ಲಾರಿ ಮಾಲೀಕ ಪ್ರಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕೊಳ್ಳೆಗಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ