*ಕಬ್ಬು ಬೆಳೆಗಾರರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್*: *ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳಿಂದ ತೀವ್ರ ಸಂಚಲನ ಸೃಷ್ಟಿಸಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ. ತಮ್ಮ ಬೇಡಿಕೆ ಈಡೇರಿಸಲು ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದಾರೆ.
ಸರ್ಕಾರಗಳಿಗೆ ಅಂತಿಮ ಗಡುವು ನೀಡುವ ಮೂಲಕ ಪ್ರತಿಭಟನೆಗೆ ಕೊಂಚ ಬ್ರೇಕ್ ನೀಡಿದ್ದು, ಬೇಡಿಕೆ ಈಡೇರಿಸದಿದ್ದರೆ ಸಚಿವರ ಮನೆಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.
ಕಬ್ಬು ಬೆಳೆಗಾರರು ನವೆಂಬರ್ 26ರ ವರೆಗೂ ನಮ್ಮ ಬೇಡಿಕೆ ಈಡೇರಿಸಲು ಕಾಲಾವಕಾಶ ನೀಡಲಾಗಿದೆ. ಅಷ್ಟರಲ್ಲಿ ಬೇಡಿಕೆ ಈಡೇರಿಸದಿದ್ದರೆ 1 ಕೋಟಿ ರೈತರು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸಂಬಂಧಿಸಿದಂತೆ ತಕ್ಷಣ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಬೇಕು. ಎಲ್ಲೆಂದರಲ್ಲಿ ಸಭೆ ನಡೆಸುವುದು ಸರಿಯಲ್ಲ. ಆಡಳಿತಕೇಂದ್ರದಲ್ಲೇ ಸಭೆ ನಡೆಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




