ಪ್ರಗತಿವಾಹಿನಿ ಸುದ್ದಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ವಿಚಿತ್ರವಗೈ ಸಾವನ್ನಪ್ಪಿರುವ ಘಟನೆ ನಡೆದಿದೆ. ನೇಣಿಗೆ ಕೊರಳೊಡ್ಡಿದ್ದ ವೇಳೆ ನೇಣಿನ ಹಗ್ಗ ತುಂಡಾಗಿ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.
ಮಿಲ್ರಾಯ್ (55) ಮೃತ ವ್ಯಕ್ತಿ. ಮನೆಯ ಮೊದಲ ಮಹಡಿಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ನರಳಾಡುತ್ತಿದ್ದ ವೇಳೆ ನೇಣಿನ ಹಗ್ಗ ತುಂಡಾಗಿದೆ. ಪರಿಣಾಮ ವ್ಯಕ್ತಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ