
ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಪೇಶಾವರದ ಮಸೀದಿಯಲ್ಲಿ ಆತ್ಮಹುತಿ ಬಾಂಬ್ ದಾಳಿ ನಡೆದಿದ್ದು, 46 ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಡೆದಿದೆ.
ಪಾಕಿಸ್ತಾನದ ವಾಯುವ್ಯ ನಗರದ ಪೇಶಾವರನಲ್ಲಿರುವ ಮಸೀದಿಯೊಂದರಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಪ್ರಾರ್ಥನೆಗೆಂದು ಬಂದಿದ್ದ 46 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 150 ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.
ಮಸೀದಿಯಲ್ಲಿ ಪ್ರಾರ್ಥನ್ನೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದಾರೆ ಈ ವೇಳೆ ಬಾಂಬ್ ದಾಳಿ ನಡೆದಿದೆ. ಮಸೀದಿಯ ಒದು ಭಾಗ ನೆಲಸಮವಾಗಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ರಕ್ಷನಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
*ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು*
https://pragati.taskdun.com/teachers-selection-listcancelhigh-courtorder/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ