LatestWorld

*ಆತ್ಮಾಹುತಿ ಬಾಂಬ್ ದಾಳಿ: 13 ಜನ ಭದ್ರತಾ ಸಿಬ್ಬಂದಿ ಸಾವು*

ಪ್ರಗತಿವಾಹಿನಿ ಸುದ್ದಿ: ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಜನ ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

ಪಾಕಿಸ್ತಾನದ ಉತ್ತರ ವಜೀರಿಸ್ತಾನ್ ಜಿಲ್ಲೆಯಲ್ಲಿ ಇಂದು ಬಾಂಬ್ ನಿಷ್ಕ್ರಿಯ ಘಟಕಕ್ಕೆ ಸೇರಿದ ಮೈನ್-ರೆಸಿಸ್ಟೆಂಟ್ ಅಂಬುಶ್ ಪ್ರೊಟೆಕ್ಟೆಡ್ ವಾಹನಕ್ಕೆ ಆತ್ಮಾಹುತಿ ಬಾಂಬರ್ ಸ್ಫೋಟಕಗಳಿಂದ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಲಾಗಿದೆ. ಈ ದಾಳಿಯಲ್ಲಿ 13 ಜನ ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 14 ನಾಗರಿಕರು ಸೇರಿ 24 ಜನರು ಗಾಯಗೊಂಡಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಕರ್ಫ್ಯೂ ವಿಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button