
ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುದ್ಘಾಕರ್ ಹೆಸರು ಬರೆದಿಟ್ಟು ಜಿಲ್ಲಾ ಪಂಚಾಯತ್ ಕಚೇರಿ ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಸಂಸದ ಕೆ.ಸುಧಾಕರ್ ಹಾಗೂ ಬೆಂಬಲಿಗರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಗುತ್ತಿಗೆ ಆಧಾರದ ಚಾಲಕ ಎನ್. ಬಾಬು ಆತ್ಮಹತ್ಯೆ ಮಾಡಿಕೊಂಡವರು.
ಸಂಸದರ ಬೆಂಬಲಿಗರಾದ ನಾಗೇಶ್ ಹಾಗೂ ಮಂಜುನಾಥ್ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.