Kannada NewsKarnataka NewsLatest
*ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ.
ಭುವನೇಶ್ವರಿ, ಮೋಹನ್, ದರ್ಶನ್ ಆತ್ಮಹತ್ಯೆಗೆ ಶರಣಾದವರು. ಎರಡು ದಿನಗಳ ಹಿಂದೆಯೇ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಮನೆಯ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ಕುಟುಂಬದ ಮೂವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.




