ಪ್ರಗತಿವಾಹಿನಿ ಸುದ್ದಿ; ಹಾವೇರಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.
ಹನುಮಂತಗೌಡ ಪಾಟೀಲ್ (52), ಲಲಿತಾ ಪಾಟೀಲ್ (50) ಹಾಗೂ ನೇತ್ರಾ (22) ಮೃತರು. ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೇ ಮನೆಯಲ್ಲಿದ್ದ ಮತ್ತೋರ್ವ ಮಗಳೊಂದಿಗೆ ದಂಪತಿ ನೇಣಿಗೆ ಕೊರಳೊಡ್ಡಿದ್ದಾರೆ.
ಹನುಮಂತೇಗೌಡ ಲಲಿತಾ ದಂಪತಿ ಮಗಳ ಮದುವೆಗಾಗಿ 25 ಲಕ್ಷ ರೂಪಾಯಿ ಸಾಲ ಮಾಡಿದ್ದರಂತೆ. ಆದರೆ ಸಾಲ ತೀರಿಸಲು ಸಾಧ್ಯವಾಗದೇ ಬೇಸತ್ತಿದ್ದರು ಎನ್ನಲಾಗಿದೆ. ಇದರರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
*ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ; ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ?*
https://pragati.taskdun.com/teachersuicidetrainprotestsangolli-rayanna-railway-station/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ