ಹಾಸ್ಟೇಲ್ ನಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಫ್ಯಾನ್ ಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಹಾಸ್ಟೇಲ್ ನಲ್ಲಿ ನಡೆದಿದೆ.

ಪಿಯು ಕಾಲೆಜು ವಿದ್ಯಾರ್ಥಿನಿ ವರ್ಷಿತಾ (18) ಮೃತ ಯುವತಿ. ಮೃತ ವರ್ಷಿತಾ ವಾಯಕೊಂಡ ತಾಲೂಕಿನ ಬಸ್ಸಾಪುರ ನಿವಾಸಿ. ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಹಾಸ್ಟೇಲ್ ವಾರ್ಡನ್ ಹಾಗೂ ಸಿಬ್ಬಂದಿಯೇ ಮಗಳ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button