
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಗ್ರಾಮದಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನದಿಂದ ರಸ್ತೆ ಕಾಮಗಾರಿಗೆ ಅನುದಾನ ಮಂಜೂರಾಗಿದೆ. ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವ ಮೂಲಕ ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.

ಈ ವೇಳೆ ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಯಲ್ಲಪ್ಪ ಕಲಕಾಂಬ್ಕರ್, ಮಾರುತಿ ಪಾಟೀಲ, ಮಹಾದೇವ ಕಂಗ್ರಾಳಕರ್, ಪರಶುರಾಮ ತೋರೆ, ನಿರ್ಮಲಾ ಕಲಕಾಂಬ್ಕರ್, ರಾಜಶ್ರೀ ಕೆ, ಸರಿತಾ ತುಪ್ಪಟ್, ವೈಶ್ಣವಿ ಖಟಾವಕರ್, ಪಿಡಿಓ ವೀಣಾ ಹಲವಾಯಿ, ವರ್ಷಾ ಸಂಗನಕರ್ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ