Belagavi NewsBelgaum News
*ಸುಳಗಾ: ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸ್ಥಳ ಸಮೀಕ್ಷೆ ನಡೆಸಿದ ಮೃಣಾಲ್ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರ ಹಿತ ದೃಷ್ಟಿಯಿಂದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ಥಳೀಯರೊಂದಿಗೆ ಸ್ಥಳದ ಸಮೀಕ್ಷೆ (ಸರ್ವೇ) ನಡೆಸಿದರು.

ಈ ಭಾಗದ ಶಾಸಕರು ಹಾಗೂ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಬ್ರಿಡ್ಜ್ ಕಂ ಬ್ಯಾರೇಜ್ ಮಂಜೂರಾಗಿದ್ದು, ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.
ಈ ವೇಳೆ ಸಹಾಯಕ ಇಂಜಿನಿಯರ್ ಮಾಳಗಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂಜಯ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ