Kannada NewsLatest

ಸುಳೇಭಾವಿ ಜೋಡಿ ಕೊಲೆ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಮಾರಿಹಾಳ ಠಾಣೆಯ ಹೆಡ್ ಕಾನ್ಸ್ ಟೇಬಲ್ ಬಿ.ಎಸ್.ಬಳಗಣ್ಣವರ್ ಹಾಗೂ ಪೊಲೀಸ್ ಸಿಬ್ಬಂದಿ ಆರ್.ಎಸ್.ತಳೇವಾಡೆ ಅವರನ್ನು ಕರ್ತವ್ಯಲೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

ಅಕ್ಟೋಬರ್.6ರಂದು ರಾತ್ರಿ ಬೆಳಗಾವಿ ಜಿಲ್ಲೆಯ ಸುಳೇಭಾವಿ ಗ್ರಾಮದಲ್ಲಿ ಎರಡು ಗ್ಯಾಂಗ್ ಗಳ ನಡುವೆ ಗಲಾಟೆ ನಡೆದು, ವಿಕೋಪಕ್ಕೆ ತಿರುಗಿ ಇಬ್ಬರು ಕೊಲೆ ನಡೆದಿತ್ತು. ಮಹೇಶ್ ಹಾಗೂ ಪ್ರಕಾಶ್ ಎಂಬುವವರು ಗ್ಯಾಂಗ್ ವಾರ್ ನಲ್ಲಿ ಹತ್ಯೆಯಾಗಿದ್ದರು. ಸ್ಥಳದಲ್ಲಿ ಗ್ಯಾಂಗ್ ವಾರ್ ಬಗ್ಗೆ ಪೊಲೀಸ್ ಸಿಬ್ಬಂದಿಗಳಿಗೆ ಮಾಹಿತಿ ಇದ್ದರೂ ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ನಿರ್ಲಕ್ಷ ಮೆರೆದಿದ್ದ ಹಿನ್ನೆಲೆಯಲ್ಲಿ ಇದೀಗ ಬೆಳಗಾವಿ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಮಾರಿಹಾಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಭೀಕರ ಅಪಘಾತ: ಏಕಾಏಕಿ ಹೊತ್ತಿ ಉರಿದ ಬಸ್; 11 ಪ್ರಯಾಣಿಕರು ಸಜೀವದಹನ

https://pragati.taskdun.com/latest/nasikbus-accidentfire11-death/

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button