Latest

ಕೊಲೆ ಆರೋಪಿ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಪ್ರಗತಿವಾಹಿನಿ ಸುದ್ದಿ; ದಕ್ಷಿಣ ಕನ್ನಡ; ಬಿಜೆಪಿ ಮುಖಂಡನ ಕೊಲೆಯಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಆರೋಪಿ ಸಂಪತ್ ಕುಮಾರ್ (35) ದುಷ್ಕರ್ಮಿಗಳ ಗುಂದಿಗೆ ಬಲಿಯಾದ ವ್ಯಕ್ತಿ. ಸುಳ್ಯದ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಸಂಪತ್ ಕುಮಾರ್, ಒಂದು ವರ್ಷದ ಹಿಂದೆ ನಡೆದಿದ್ದ ಬಿಜೆಪಿ ಮುಖಂಡ ಬಾಲಚಂದ್ರ ಕಳಗ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಅಲ್ಲದೇ ಈ ಪ್ರಕರಣದಲ್ಲಿ ಜೈಲು ಸೇರಿದ್ದ ಸಂಪತ್ ಕುಮಾರ್, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಇಂದು ಮನೆಯಿಂದ ಹೊರ ಬರುತ್ತಿದ್ದ ಸಂಪತ್ ಕುಮಾರ್ ಮೇಲೆ ನಾಲ್ವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಾಗಲೇ ಸಂಪತ್ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

Related Articles

Back to top button