Election NewsKannada NewsKarnataka NewsNationalPolitics

ದಳಪತಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದ ಸುಮಲತಾ ಅಂಬರೀಷ್

ಪ್ರಗತಿವಾಹಿನಿ ಸುದ್ದಿ: ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಾನು ಕ್ಷೇತ್ರ ತ್ಯಾಗ ಮಾಡಿದ್ದೇನೆ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಎನ್​​ಡಿಎಗೆ ಕೊಟ್ಟಿದ್ದೇವೆ. ನಾವು ನಿಷ್ಠೆಯಿಂದ ಕೆಲಸ ಮಾಡಿ, ಸ್ವತಂತ್ರ ಸಂಸದೆಯಾಗಿ ನನ್ನ‌ ಜವಾಬ್ದಾರಿ ನಿರ್ವಹಿಸಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಶುಕ್ರವಾರ ಮತದಾನ ಮಾಡಿದ ನಂತರ ಮಾತನಾಡಿದ ಅವರು, ದೇವೆಗೌಡರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಇರದೆ ಆ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಸುಮಲತಾ ಅಂಬರೀಶ್, ಚುನಾವಣೆಯಲ್ಲಿ ಸಹಕರಿಸಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.

ಈ‌ ದಿನದವರೆಗೂ ಜೆಡಿಎಸ್​ನ ಯಾವ ನಾಯಕರು ಯಾವುದೇ ಸಭೆಗೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತದೆ. ಆದರೆ ಅವರು ನನ್ನ‌ ಕರೆದಿಲ್ಲ, ನಾನಿಲ್ಲದೇ ಅವರು ಚುನಾವಣೆ ಮಾಡಿಕೊಳ್ಳುತ್ತೀವಿ ಎಂಬ ಭಾವನೆ ಇರಬಹುದು ಎಂದು ದಳಪತಿಗಳಿಗೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟರು.

ದೇವೇಗೌಡರು ಹೇಳಿಕೆ ನೀಡಿದ ನಂತರ ನಿನ್ನೆಯಿಂದ ನನಗೆ ಒಂದಷ್ಟು ಕರೆ ಬಂದಿವೆ. ನನ್ನನ್ನು ಯಾವುದೇ ಪ್ರಚಾರಕ್ಕೆ ಕರೆದಿಲ್ಲ. ಕುಮಾರಸ್ವಾಮಿ ನಮ್ಮ ಮನೆಗೆ ಬಂದು ಹೋದ ನಂತರ ನನಗೆ ಒಂದು ಕರೆ ಮಾಡಿ ಪ್ರಚಾರಕ್ಕೆ ಬನ್ನಿ ಎಂದು ಕೇಳಿಲ್ಲ. ಇಷ್ಟು ತ್ಯಾಗ ಮಾಡಿಯೂ ನನ್ನ ಕರೆಯಲಿಲ್ಲ ಅನ್ನೋದು ನನಗೆ ಬೇಸರವಾಯ್ತು. ಹಾಗಿದ್ದರೆ ನಾನು ಕ್ಷೇತ್ರ ತ್ಯಾಗ ಮಾಡಿದ್ದು ತಪ್ಪಾ.‌ ನನ್ನ ಅಭಿಮಾನಿಗಳು ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರು. ಸೋತ ಸೀಟನ್ನೇ ಬಿಡಲ್ಲ ಆದರೆ ನಾನು ಗೆದ್ದ ಸೀಟು ಬಿಟ್ಟು ಕೊಟ್ಟಿದ್ದೀನಿ ಎಂದು ದಳಪತಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button