Kannada NewsLatestPolitics

*ಕೋರ್ಟ್ ದೋಷಿ ಎಂದ ಮೇಲೆ ಮುಗೀತು; ಮಾತನಾಡಲು ಏನೂ ಇಲ್ಲ ಎಂದ ಸುಮಲತಾ*

ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಶ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ತಾವು ಹೆಚ್ಚಿಗೆ ಮಾತನಾಡಲ್ಲ ಎಂದಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ನ್ಯಾಯಾಲಯದ ಆದೇಶವನ್ನು ಯಾರೇ ಆದರೂ ಪಾಲಿಸಬೇಕು. ಈ ಬಗ್ಗೆ ನಾನು ಹೆಚ್ಚು ಕಮೆಂಟ್ ಮಾಡುವುದಿಲ್ಲ ಎಂದು ಹೇಳಿದರು.

ಕೋರ್ಟ್ ತೀರ್ಪು ಕೊಟ್ಟಮೇಲೆ ಮಾತನಾಡಲು ಏನೂ ಇಲ್ಲ. ನ್ಯಾಯಾಲಯ ದೋಷಿ ಎಂದು ಹೇಳಿದ ಮೇಲೆ ಮುಗೀತು. ಕೋರ್ಟ್ ಏನು ಶಿಕ್ಷೆ ಪ್ರಕಟ ಮಾಡುತ್ತದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button