Kannada NewsKarnataka NewsLatestPolitics

*ಲೋಕಸಭಾ ಸ್ಪರ್ಧಾ ಕಣದಿಂದ ಹಿಂದೆ ಸರಿದ ಸುಮಲತಾ; ಮೈತ್ರಿ ಅಭ್ಯರ್ಥಿಗೆ ಬೆಂಬಲ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

Home add -Advt

ಮಂಡ್ಯದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗೌರವಿಸಿ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸಿ, ಎಪ್ರಿಲ್ 6 ರಂದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳದ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಹಾದಿ ಸುಗಮವಾದಂತಾಗಿದೆ.

Related Articles

Back to top button