Latest

*ರಾಜ್ಯ ರಾಜಕೀಯಕ್ಕೆ ಸುಮಲತಾ ಎಂಟ್ರಿ ಬಹುತೇಕ ಖಚಿತ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಸಂಸದೆ ಸುಮಲತಾ ರಾಜ್ಯ ರಾಜಕಾರಣಕ್ಕೆ ಬರಬೇಕು ಎಂಬ ಬೆಂಬಲಿಗರ ಒತ್ತಾಯಕ್ಕೆ ಸುಮಲತಾ ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಸ್ಪರ್ಧೆ ಬಹುತೇಕ ಖಚಿತವಾಗಿದೆ.

ಸುಮಲತಾ ರಾಜ್ಯ ರಾಜಕಾರಣಕ್ಕೆ ಬರಬೇಕು ಎಂದು ಒತ್ತಾಯಿಸಿ ಜನವರಿ 31ರಂದು ಸುಮಲತಾ ಬೆಂಬಲಿಗರು ಸಭೆ ನಡೆಸಿದ್ದರು. ಬೆಣ್ಬಲಿಗರ ಒತ್ತಡಕ್ಕೆ ಸುಮಲತಾ ಮಣಿದಿದ್ದು, ರಾಜ್ಯ ರಾಜಕೀಯಕ್ಕೆ ಬರಲು ಒಪ್ಪಿದ್ದಾರೆ. ವಿಧಾನಸಭಾ ಚುನಾವಣೆಗೂ ಸ್ಪರ್ಧೆಗೆ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಪತಿ ಅಂಬರೀಶ್ ಪ್ರತಿನಿಧಿಸಿದ್ದ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಆದರೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರಾ ಅಥವಾ ಕಾಂಗ್ರೆಸ್ ನತ್ತ ಮುಖ ಮಾಡುತ್ತಾರಾ ಎಂಬುದು ಸ್ಪಷ್ಟವಾಗಿಲ್ಲ. ಬೆಂಬಲಿಗರ ಸಭೆಯಲ್ಲಿ ಕೆಲವರು ಬಿಜೆಪಿಗೆ ಸೇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರೆ ಇನ್ನು ಕೆಲವರು ಅಂಬರೀಶ್ ಕಾಂಗ್ರೆಸ್ ನಲ್ಲಿ ಇದ್ದರು. ಹಾಗಾಗಿ ಕಾಂಗ್ರೆಸ್ ಸೇರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ಸುಮಲತಾ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ತೀವ್ರತೆ ಪಡೆದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ

Home add -Advt

Related Articles

Back to top button