Latest

S.M.ಕೃಷ್ಣ ಭೇಟಿಯಾದ ಸಂಸದೆ; ಕುತೂಹಲ ಮೂಡಿಸಿದ ಸುಮಲತಾ ನಡೆ; BJP ಸೇರ್ಪಡೆ ಬಗ್ಗೆ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಇನ್ನೊಂದೆಡೆ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಚರ್ಚೆ ಬೆನ್ನಲ್ಲೇ ಇದೀಗ ಸುಮಲತಾ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗುವ ಮೂಲಕ ಕುತೂಹಲ ಇಮ್ಮಡಿಗೊಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಸುಮಲತಾ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಸಿಕ್ಕಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಲು ಭೇಟಿಯಾಗಿದ್ದೆ ಹೊರತು ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಬಿಜೆಪಿ ಸೇರ್ಪಡೆ ವಿಚಾರವಾಗಿ ಈವರೆಗೆ ನಾನು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮಂಡ್ಯದಿಂದ ಹಲವರು ಬಂದಿದ್ದಾರೆ. ಅವರೊಂದಿಗೆ ಚರ್ಚಿಸಬೇಕಿದೆ. ನನ್ನ ಲಾಭ, ನಷ್ಟ ನೋಡಿಕೊಂಡು ತೀರ್ಮಾನಿಸಲ್ಲ, ನನ್ನ ಜೊತೆ ಇರುವವರನ್ನು ನೋಡಿಕೊಂಡೇ ತೀರ್ಮಾನ ಕೈಗೊಳ್ಳುತ್ತೇನೆ. ಹಿತೈಷಿಗಳು, ಕುಟುಂಬದವರು ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಂದು ಹೇಳುತ್ತಿರುವವರ ಜೊತೆಯೂ ಚರ್ಚೆ ನಡೆಸಬೇಕಿದೆ. ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

Home add -Advt

Related Articles

Back to top button