Karnataka News

*ಈ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ಬಿಸಿಲಿನ ತಾಪಮಾನ ಹೆಚ್ಚಾಗಿರುವ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳ ಸಮಯ‌ ಬದಲಾವಣೆ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ

ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್ ನ ಇತರ ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

Related Articles

Back to top button