Election NewsKannada NewsKarnataka NewsPolitics

*ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ನಡುವೆ ರಾಜಕೀಯ ಪಕ್ಷಗಳ ನಾಯಕರು ಭಾಷಣದ ಅಬ್ಬರದಲ್ಲಿ ವೈಯಕ್ತಿಕವಾಗಿ ಟೀಕೆ ಮಾಡುವ ಮೂಲಕ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ.

ಕಾಂಗ್ರೆಸ್ ನಲ್ಲಿರುವವರು ನಪುಸಂಕರು, ಶೆಂಡರು ಎಂದು ಬಹಿರಂಗ ವೇದಿಕೆಯಲ್ಲೆ ಬಿಜೆಪಿ ಮುಖಂಡ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.‌

Home add -Advt

ಗುರುವಾರ ಬೀದರ್ ನಗರದ ಗಣೇಶ ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ನಾಮಪತ್ರ ಸಲ್ಲಿಕೆ ನಿಮಿತ್ತ ನಡೆದ ಬಹಿರಂಗ ಸಮಾವೇಶದಲ್ಲಿ  ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ, ರಾಮಾಯಣದ ರಾಮ ವನವಾಸಕ್ಕೆ ಹೊಗಿ ವಾಪಸ್ಸಾಗಿ ಬರುವ ಸಂಧರ್ಬದ ಕಥೆಯನ್ನು ಹೇಳುತ್ತ ಕಾಂಗ್ರೆಸ್ ಪಕ್ಷಕ್ಕೆ ತುಲನೆ ಮಾಡಿ ವಿವಾದ ಸೃಷ್ಟಿಸಿದ್ದಾರೆ.‌

Related Articles

Back to top button