*ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರದ ಹುನ್ನಾರ: ಪ್ರತಿಭಟನೆ ಎಚ್ಚರಿಕೆ ನೀಡಿದ ಸುನೀಲ್ ಕುಮಾರ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದಾಗಿನಿಂದಲೂ ಆರ್ಥಿಕತೆ ಕುಸಿದು ಬಿದ್ದಿದೆ. ಬೆಲೆ ಏರಿಕೆ ಹೊರೆ ಜನಸಾಮಾನ್ಯರ ಮೇಲೆ ಹಾಕಿ. ಹಲವು ಯೋಜನೆಗಳಿಗೆ ಕತ್ತರಿ ಹಾಕಲು ಹೋರಟಿದೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಸುನೀಲ್ ಕುಮಾರ್, ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡದೆ ಅವೈಜ್ಞಾನಿಕವಾಗಿ ಜಾರಿ ಮಾಡಿದ್ದಾರೆ. ಈಗ ಸಂಪನ್ಮೂಲಗಳ ಕ್ರೂಢೀಕರಣಕ್ಕಾಗಿ ಬೆಲೆ ಏರಿಕೆ ಮಾಡುತ್ತಿದ್ದಾರೆ. ಇನ್ನೂ ಸಾಲದೆಂಬಂತೆ 11 ಲಕ್ಷ ರೇಷನ್ ಕಾರ್ಡ್ ತೆಗೆದು ಹಾಕಲು ಹುನ್ನಾರ ನಡೆಸಿದ್ದಾರೆ ಎಂದರು.
ರೇಷನ್ ಕಾರ್ಡ್‌ಗಳನ್ನ ರದ್ದು ಪಡಿಸಲು ಸರ್ಕಾರ ಮುಂದಾಗಿರುವುದು ದುರಾದೃಷ್ಟಕರ. ಸರ್ಕಾರದ ಈ ಜನವಿರೋಧಿ ನೀತಿ ವಿರುದ್ಧ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ