Film & EntertainmentNational

*ದಿಢೀರನೆ ಆಸ್ಪತ್ರೆಗೆ ದಾಖಲಾದ ಸೂಪರ್ ಸ್ಟಾರ್ ರಜನಿಕಾಂತ*

ಪ್ರಗತಿವಾಹಿನಿ ಸುದ್ದಿ: ಸೂಪರ್‌ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿದೆ. ನಿನ್ನೆ ಮಧ್ಯ ರಾತ್ರಿ ದಿಢೀರನೇ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಜನಿಕಾಂತ್ ಆರೋಗ್ಯದಲ್ಲಿ ದಿಢೀರನೇ ಏರುಪೇರಾದ ಹಿನ್ನೇಲೆ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.‌ ಆದರೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಮಧ್ಯ ರಾತ್ರಿ ರಜನಿಕಾಂತ್‌ಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ವೈದ್ಯರು ರಜನಿಕಾಂತ್ ಅವರ ವೈದ್ಯಕೀಯ ತಪಾಸಣೆ ಮಾಡುತ್ತಿದ್ದು, ಸೂಪರ್‌ಸ್ಟಾರ್ ಅವರ ಮೇಲೆ ತೀವ್ರ ನಿಗಾವಹಿಸಿದ್ದಾರೆ.

ಸದ್ಯ ರಜನಿ ಆರೋಗ್ಯ ಸ್ಥಿರವಾಗಿದ್ದು, ಇಂದು ರಾತ್ರಿ ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ರಜನಿಕಾಂತ್ ಪತ್ನಿ ಲತಾ ಕೂಡ ಇದು ರೆಗ್ಯೂಲರ್ ಚೆಕಪ್ ಎಂದು ಹೇಳಿದ್ದಾರೆ.

Home add -Advt

76 ವರ್ಷದ ನಟ ಸದ್ಯ ಎರಡು ಚಿತ್ರಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ನಿರ್ದೇಶಕ ಜ್ಞಾನವೇಲ್‌ ರಾಜಾ ಅವರ ವೇಟೈಯಾನ್ ಸಿನಿಮಾ ಅಕ್ಟೋಬರ್ 10 ರಂದು ಬಿಡುಗಡೆಗೆ ತಯಾರಾಗಿದೆ. ಇನ್ನು ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಕೂಲಿ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ವೇಳೆ ಹಠಾತ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದೆ ಎಂದೂ ವರದಿಯಾಗಿದೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button