GIT add 2024-1
Kore@40
Beereshwara 33

ಚಿಕ್ಕೋಡಿ ಲೋಕಸಭಾ ಕ್ಷೇತ್ರದ  ಸಮಗ್ರ ಅಭಿವೃದ್ಧಿಗೆ ಅಣ್ಣಾಸಾಹೇಬ ಜೊಲ್ಲೆ ಬೆಂಬಲಿಸಿ :ಮಾಜಿ ಸಚಿವೆ ಶಶಿಕಲಾ ಜೊಲ್ಲೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೇ 07 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ನಿಪ್ಪಾಣಿ ಕ್ಷೇತ್ರದ ಭಿವಶಿ, ಸೌಂದಲಗಾ,ನಾಗನೂರ, ಯಮಗರ್ನಿ,ಬೂದಿಹಾಳ ಕೊಡ್ನಿ, ಗಾಯಕನವಾಡಿ,ಬುದಲಮುಖ ಗ್ರಾಮದಲ್ಲಿ ಪ್ರಚಾರ ಸಭೆಯನ್ನು  ಮಾಜಿ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಶಶಿಕಲಾ ಜೊಲ್ಲೆ ಮಾತನಾಡಿ ಬಿಜೆಪಿಯ 10 ವರ್ಷದ ಆಡಳಿತದಲ್ಲಿ ಭಾರತೀಯರು ಮೆಚ್ಚುವಂತ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ.  ಭಾರತವನ್ನು ವಿಶ್ವಗುರುವಾಗಿಸಲು ಪ್ರಧಾನಿ ಮೋದಿ ಕೊಡುಗೆ ಅಪಾರವಾಗಿದೆ.ಈ

Emergency Service

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ವರ್ಷಕ್ಕೆ 6 ಸಾವಿರ ಕೊಟ್ಟರೆ, ಯಡಿಯೂರಪ್ಪನವರು ಮುಖ್ಯಮಂತ್ರಿ ಇದ್ದಾಗ ರಾಜ್ಯ ಸರ್ಕಾರದಿಂದ – 4 ಸಾವಿರ ಕೊಡುತ್ತಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ರೈತರಿಗೆ ನೀಡುತ್ತಿದ್ದ 4 ಸಾವಿರ ಬಂದ್ ಮಾಡಿತು.ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣ ಮಾಡಿ ಹಿಂದೂ ಸಮಾಜದ ಗೌರವವನ್ನು ಪ್ರಧಾನಿ ಮೋದಿ ಎತ್ತಿ ಹಿಡಿದಿದ್ದಾರೆ. ಬಹಳ ವಷರ್ಗಳಿಂದ ಕಗ್ಗಂಟಾಗಿದ್ದ ದೇಶದ ಅನೇಕ ಸಮಸ್ಯೆಗಳು ಮೋದಿ ಆಡಳಿತದಲ್ಲಿ ಬಗೆಹರಿದಿದೆ ಜಲಜೀವನ ಮಷೀನ್ ಮೂಲಕ ಮನೆ ಮನೆಗೆ ನೀರು ಒದಗಿಸಲಾಗುತ್ತಿದೆ. ಉಜ್ವಲ ಯೋಜನೆಯಡಿ ಸುಮಾರು 13 ಕೋಟಿ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ನೀಡಲಾಗಿದೆ. ಆಯುಸ್ಕಾನ್ ಭಾರತ್ ಅಡಿಯಲ್ಲಿ  ಲಕ್ಷವರೆಗೆ ಉಚಿತ ಆರೋಗ್ಯ ಚಿಕಿತ್ಸೆ, ರಾಷ್ಟ್ರೀಯ ಶಿಕ್ಷಣ ನೀತಿ ಮುಂತಾದ ಅಭಿವೃದ್ಧಿ ಕಾರ್ಯಗಳಿಂದ ದೇಶವನ್ನು ಸದೃಢಗೊಳಿಸುತ್ತಿದ್ದಾರೆ. ಬಿಜೆಪಿ ಅಭಿವೃದ್ಧಿಪರ ಆಡಳಿತ ಸಹಿಸದ ಕಾಂಗ್ರೆಸ್ ರಾಜ್ಯ, ದೇಶವನ್ನು ದಿವಾಳಿಯತ್ತ ಕೊಂಡೊಯ್ಯುವ ಹುನ್ನಾರ ನಡೆಸಿದೆ. ದೇಶದ ಅಭಿವೃದ್ಧಿ, ಭದ್ರತೆ, ಅಖಂಡತೆಗಾಗಿ ಬರುವ ಚುನಾವಣೆಯಲ್ಲಿ ಬಿಜೆಪಿ ಮತ ನೀಡಿ ಪ್ರಧಾನಿ ಮೋದಿ ಕೈ ಬಲಪಡಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುನೀಲ  ಪಾಟೀಲ, ಶಿವಾಜಿ ಪರಿಟ, ವೈಭವ ಪಾಟೀಲ, ಧೀರಜ ಪರಿಟ, ನಿತಿನ ಪರಿಟ,ಸೂರಜ ಪರಿಟ, ದೀಪಕ ಪಾಟೀಲ, ಬಾಳಾಸೋ ಬನ್ನೆ,ರಾಣಿ ಅಜಿತ ಪರಿಟ, ಗೀತಾ ಪಾಟೀಲ, ಮಂಗಲ ಪರಿಟ, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Laxmi Tai add
Bottom Add3
Bottom Ad 2