
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಯೋಗ ಶಿಕ್ಷಕರೊಬ್ಬರು ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿರುವ ಘಟನೆ ನಡೆದಿದೆ.
ಶಾಂತವೀರ ಗಂಗಾಧರ ಮಠ (57) ಮೃತರು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಿರೇಬೆನಕಲ್ ಗ್ರಾಮದ ಮುಖ್ಯ ಶಿಕ್ಷಕರಾಗಿ ಹಾಗೂ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗಂಗಾಧರ ಮಠ ಅವರುಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



