ಪ್ರಗತಿವಾಹಿನಿ ಸುದ್ದಿ, ಗೋಕಾಕ: ತೀವ್ರವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಶರತ್ತುಬದ್ದ ಲಾಕಡೌನ್ ಮೊದಲ ದಿನ ಜನರು ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಿದರು.
ಮಧ್ಯಾಹ್ನ ೧೨ ಗಂಟೆಗೆ ಆಗಮಿಸಿದ ಪೊಲೀಸರು ನಗರದಾದ್ಯಂತ ಗಸ್ತು ತಿರುಗಿ ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಸೂಕ್ತ ಕ್ರಮ ಕೈಗೊಂಡಿದ್ದರು.
ನಗರದ ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಬ್ಯಾಳಿಕಾಟಾ, ನಾಕಾ ನಂ ೧ ಸೇರಿದಂತೆ ಇತರ ಜನನಿಬಿಡ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಬಂದ್ ಆಗಿದ್ದರಿಂದ ಜನದಟ್ಪಣೆ ಕಂಡು ಬರಲಿಲ್ಲ. ಬೇರೆ ಊರಿಗೆ ಹೋಗುವವರು ಅಲಲ್ಲಿ ನಿಂತು ಬಸ್ಸಗಾಗಿ ಕಾಯುತ್ತಿದ್ದ ದೃಶ್ಯಗಳು ಕಂಡು ಬಂದವು. ಉಳಿದಂತೆ ಅಗತ್ಯ ವಸ್ತುಗಳು ಮಾರಾಟ ಮತ್ತು ಖರೀದಿಗೆ ಯಾವುದೇ ಅಡೆತಡೆಯಾಗಲಿಲ್ಲ . ಔಷಧಿ ಅಂಗಡಿಗಳು , ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಿದವು.
ಕೊರೋನಾ ಸೋಂಕು ತಗುಲಿದ ತಹಶೀಲ್ದಾರ್ ಕಛೇರಿ ಸಿಬ್ಬಂದಿ ವಾಸವಿದ್ದ ಪ್ರದೇಶದ ೫೦ ಮೀಟರ್ ಪ್ರದೇಶವನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಿ, ಆ ಪ್ರದೇಶದಲ್ಲಿ ಯಾರು ತಿರುಗಾಡದಂತೆ ಮತ್ತು ಅಲ್ಲಿಂದ ಯಾರು ಹೊರಗಡೆ ಬರದಂತೆ ಸೂಚನೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ