GIT add 2024-1
Kore@40
Beereshwara 33

ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ನನ್ನನ್ನು ಬೆಂಬಲಿಸಿ: ಸಂಸದ ಅಣ್ಣಾಸಾಹೇಬ ಜೊಲ್ಲೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕೋಡಿ ವಿಧಾನಸಭಾಕ್ಷೇತ್ರದ ಖಡಕಲಾಟ ಗ್ರಾಮದಲ್ಲಿ *ಚಿಕ್ಕೋಡಿ ಲೋಕಸಭೆ ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ  ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ* ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ನರೇಂದ್ರ ಮೋದಿ ಅವರು ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದು ಭಾರತದ ಅಭ್ಯುದಯಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಅವರನ್ನು 3ನೇ ಅವಧಿಗೆ ಪ್ರಧಾನಮಂತ್ರಿಯನ್ನಾಗಿಸಲು ಹಾಗೂ ಚಿಕ್ಕೋಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನನ್ನನ್ನು ಬೆಂಬಲಿಸಿ, ಪ್ರಚಂಡ ಬಹುಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

Emergency Service

ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಅವರು ಮಾತನಾಡಿ, ಜಾಗತಿಕ ಮಟ್ಟದಲ್ಲಿ ಭಾರತವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾದರೆ ಮತ್ತೊಮ್ಮೆ  ನರೇಂದ್ರ ಮೋದಿ ಅವರ ಕೈ ಬಲಪಡಿಸಲು  ಬಿಜೆಪಿಗೆ ಮತ ನೀಡಬೇಕು. ಮತ್ತು  ಕಳೆದ 10 ವರ್ಷಗಳಲ್ಲಿ  ಮೋದಿ ಅವರು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯ ಕಾರ್ಯಕರ್ತರಿಂದ ಆಗಬೇಕು. ವಿಕಸಿತ ಭಾರತ ಸಂಕಲ್ಪಕ್ಕಾಗಿ ಮತ್ತೊಮ್ಮೆ ಮೋದಿ ಅವರ ಕೈ ಬಲಪಡಿಸಲು ಚಿಕ್ಕೋಡಿಯಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದರು.

ಈ ಸಭೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೊಳ, ವಿಶ್ವನಾಥ ಕಮತೆ, ಎನ್. ಜಿ. ಪಾಟೀಲ, ಪ್ರಲ್ಹಾದ ಪಾಟೀಲ, ಕಾಶಿನಾಥ ಕಮತೆ, ರಾವಸಾಬ ಝಿಪರೆ, ವಿನಾಯಕ ಪಾಟೀಲ, ಪವನ ಮಹಾಜನ, ಉಮೇಶ ಘಾಟಗೆ, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Laxmi Tai add
Bottom Add3
Bottom Ad 2