Karnataka NewsLatest

*ಮಹಾಲಕ್ಷ್ಮೀ ಹತ್ಯೆ ಪ್ರಕರಣ: ಇನ್ನಷ್ಟು ಅನುಮಾನಕ್ಕೆ ಕಾರಣವಾಯ್ತು ಫ್ರಿಜ್ ಮೇಲಿನ ಬೆರಳಚ್ಚುಗಳು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ವೈಯ್ಯಾಲಿ ಕಾವಲ್ ಮನೆಯಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು, 50ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ.

ಹಂತಕ ಬೇರೆ ರಾಜ್ಯದವನಾಗಿದ್ದು, ಆದರೆ ಬೆಂಗಳೂರಿನಲ್ಲಿಯೇ ವಾಸವಾಗಿದ್ದ ಎಂದು ಎರಡು ದಿನಗಳ ಹಿಂದಷ್ಟೇ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದರು. ಶೀಘ್ರದಲ್ಲಿಯೇ ಆತನನ್ನು ಬಂಧಿಸಲಾಗುವುದು ಎಂದು ಹೇಳಿದ್ದರು.

ಆದರೆ ಕೊಲೆಗಾರ ಇನ್ನೂ ಸಿಕ್ಕಿಬಿದ್ದಿಲ್ಲ. ಇದೀಗ ಮಹಾಲಕ್ಷ್ಮೀಯನ್ನು ಕೊಲೆಗೈದು ಪೀಸ್ ಪೀಸ್ ಮಾಡಿ ತುಂಬಿಟ್ಟಿದ್ದ ಫ್ರಿಜ್ ಮೇಲೆ ಹಾಗೂ ಮನೆಯಲ್ಲಿ ಹಲವರ ಬೆರಳಚ್ಚುಗಳು ಪತ್ತೆಯಾಗಿದ್ದು, ಮೂರ್ನಾಲ್ಕು ಜನರು ಸೇರಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಇದೇ ವೇಳೆ ಮಹಾಲಕ್ಷ್ಮೀ ತಾಯಿ ಮೀನಾ ಕೊಟ್ಟಿರುವ ದೂರಿನಲ್ಲಿಯೂ ಹಲವು ಸಂಗತಿ ಬಯಲಾಗಿದೆ. ಮಹಾಲಕ್ಷ್ಮಿ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


Related Articles

Back to top button