Latest

ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್ ತರಾಟೆ; ಉದಯ್ ಪುರ ಟೈಲರ್ ಹತ್ಯೆಗೆ ನಿಮ್ಮ ಹೇಳಿಕೆಯೇ ಕಾರಣ ಎಂದ ನ್ಯಾಯಾಲಯ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಬಾಯಿಗೆ ಬಂದಂತೆ ಮಾತನಾಡಿ, ನಾಲಿಗೆ ಹರಿಬಿಟ್ಟು ಇಂದು ಇಡೀ ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ. ನಿಮ್ಮ ಬೇಜವಾಬ್ದಾರಿ ಹೇಳಿಕೆ ರಾಷ್ಟ್ರೀಯ ಭದ್ರತೆಗೆ ಅಪಾಯವಾಗಿದೆ ಎಂದು ಛೀಮಾರಿ ಹಾಕಿದೆ.

ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ತನ್ನ ವಿರುದ್ಧದ ಎಲ್ಲಾ ಕೇಸ್ ಗಳನ್ನು ದೆಹಲಿಗೆ ವರ್ಗಾಯಿಸುವಂತೆ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ನೂಪುರ್ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಖಡಕ್ ಎಚ್ಚರಿಕೆ ನೀಡಿದೆ.

Home add -Advt

ನಿಮ್ಮ ಸಡಿಲ ನಾಲಿಗೆಯಿಂದ ದೇಶದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ. ಉದಯ್ ಪುರ ಟೈಲರ್ ಹತ್ಯೆಗೆ ನಿಮ್ಮ ಹೇಳಿಕೆಯೇ ಕಾರಣ. ನಿಮ್ಮ ಹೇಳಿಕೆ ಇಂದು ರಾಷ್ಟ್ರದ ಭದ್ರತೆಗೆ ಬೆದರಿಕೆಯಾಗಿದೆ. ಹಿಂಸಾಚಾರಗಳಿಗೂ ನೀವೇ ಜವಾಬ್ದಾರಿ. ಕೂಡಲೇ ಇಡೀ ದೇಶದ ಜನರ ಕ್ಷಮೆಯಾಚಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ; ಕೊಡಗು-ದಕ್ಷಿಣ ಕನ್ನಡದಲ್ಲಿ ಭೂಕಂಪ

Related Articles

Back to top button