ನಾಲ್ಕು ಸದಸ್ಯರನ್ನೊಳಗೊಂಡ ಸಮಿತಿ ರಚನೆ
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ನೂತನ ಕೃಷಿ ಕಾಯ್ದೆ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕೃಷಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ದೆಹಲಿ-ಹರಿಯಾಣ ಗಡಿಯಲ್ಲಿ 48 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೃಷಿ ಕಾಯ್ದೆ ಕುರಿತು ಸರ್ಕಾರ ಹಾಗೂ ರೈತರ ನಡುವಿನ ಮಾತುಕತೆ ಕುರಿತು ನಾಲ್ಕು ಸದಸ್ಯರನ್ನೊಳಗೊಂಡ ಪರಿಣಿತರ ಸಮಿತಿ ರಚಿಸಿದ್ದು, ಮುಂದಿನ ಆದೇಶದವರೆಗೂ ಕಾಯ್ದೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಪೀಠ ತೀರ್ಪು ನೀಡಿದೆ.
ದೇಶಾದ್ಯಂತ ಅನ್ನದಾತ ಪ್ರತಿಭಟನೆ ನಡೆಸಿದರೂ ಕೇಂದ್ರ ಸರ್ಕಾರ ಪ್ರತಿಭಟನೆ ನಿಭಾಯಿಸುವಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನಿನ್ನೆಯಷ್ಟೇ ಅಸಮಾಧಾನ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೃಷಿ ಕಾಯ್ದೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಕೃಷಿ ಕಾಯ್ದೆ ವಿಚಾರ; ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ಅಮಿತ್ ಶಾ ರಾಜ್ಯ ಪ್ರವಾಸ ಪಟ್ಟಿ ಪ್ರಕಟ: ಬೆಳಗಾವಿಯಲ್ಲಿ 4 ಕಾರ್ಯಕ್ರಮದಲ್ಲಿ ಭಾಗಿ
ನಾಳೆ 7-8 ಸಚಿವರ ಪ್ರಮಾಣವಚನ ಸ್ವೀಕಾರ; ಸಿಎಂ ಬಿಎಸ್ ವೈ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ