ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಶಾಸಕರು ರಾಜಿನಾಮೆ ನೀಡಿರುವುದರಿಂದ ಅದನ್ನು ಕಾಲಮಿತಿಯಲ್ಲಿ ನಿರ್ಧರಿಸಬೇಕು. ಅಲ್ಲಿಯವರೆಗೆ ಅಧಿವೇಶನದಲ್ಲಿ, ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳುವಂತೆ ಶಾಸಕರ ಮೇಲೆ ಒತ್ತಡ ಹೇರುವಂತಿಲ್ಲ ಎಂದು ಸುಪ್ರಿಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇದರಿಂದಾಗಿ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರಿಗೆ ವಿಪ್ ಅನ್ವಯವಾಗುವುದಿಲ್ಲ. ಸ್ಪೀಕರ್ ಅಧಿಕಾರದಲ್ಲೂ ಸುಪ್ರಿಂ ಕೋರ್ಟ್ ಹಸ್ತಕ್ಷೇಪ ಮಾಡಲಿಲ್ಲ.
ಇದರಿಂದಾಗಿ ರಾಜ್ಯ ಸಮ್ಮಿಶ್ರ ಸರಕಾರ ವಿಶ್ವಾಸಮತ ಯಾಚನೆಯಲ್ಲಿ ದೊಡ್ಡ ಕಂಟಕ ಎದುರಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತಕ್ಕೆ ಹೋಗುವ ಬದಲು ವಿದಾಯ ಭಾಷಣ ಮಾಡಿ ರಾಜಿನಾಮೆ ನೀಡಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಸಂವಿಧಾನ, ಸುಪ್ರಿಂ ಕೋರ್ಟ್ ಅಧಿಕಾರ ಮತ್ತು ಸ್ಪೀಕರ್ ಅಧಿಕಾರಗಳ ಕುರಿತು ಮುಂದಿನ ದಿನಗಳಲ್ಲಿ ಚರ್ಚೆ ಕೈಗೆತ್ತಿಕೊಳ್ಳುವುದಾಗಿ ಸುಪ್ರಿಂ ಕೋರ್ಟ ಸ್ಪಷ್ಟವಾಗಿ ಹೇಳಿದೆ.
ಸುಪ್ರಿಂ ಕೋರ್ಟ್ ತೀರ್ಪನ್ನು ಬಿಜೆಪಿ ಸ್ವಾಗತಿಸಿದೆ. ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿ, ತೀರ್ಪು ಖುಷಿ ನೀಡಿದೆ ಎಂದಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಸ್ಪೀಕರ್ ರಮೇಶ ಕುಮಾರ, ನಾನು ಜವಾಬ್ದಾರಿಯುತವಾಗಿ ಕ್ರಮ ತೆಗೆದುಕೊಳ್ಳುತ್ತೇನೆ. ಸುಪ್ರಿಂ ಕೋರ್ಟ್ ತೀರ್ಪಿನಿಂದ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಿದೆ. ನನ್ನ ಮೇಲೆ ಯಾವುದೇ ಒತ್ತಡ ಕೆಲಸ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಸುಪ್ರಿಂ ಕೋರ್ಟ್ ಸ್ಪೀಕರ್ ಅಧಿಕಾರದಲ್ಲಿ ಹಸ್ತೆಕ್ಷೇಪ ಮಾಡದಿರುವುದು ದೊಡ್ಡ ಗೆಲುವು ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಸಚಿವ ಡಿ.ಕೆ.ಶಿವಕುಮಾರ ಹೇಳಿಕೆ ನೀಡಿದ್ದಾರೆ. ನಿಮ್ಮ ಭವಿಷ್ಯ ಹಾಳು ಮಾಡಿಕೊಳ್ಳದೆ ಈಗಲಾದರೂ ಮರಳಿ ಬನ್ನಿ ಎಂದು ಶಿವಕುಮಾರ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ –
ವಿಶ್ವಾಸಮತದಲ್ಲಿ ಭಾಗವಹಿಸುವುದು ಅತೃಪ್ತರಿಗೆ ಕಡ್ಡಾಯವಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ