ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಎಸ್ ಎಸ್ ಎಲ್ ಸಿ ಪರೀಕ್ಷೆ ಸಮೀಪಿಸುತ್ತಿರುವುದರಿಂದ ಹಿಜಾಬ್ ತೀರ್ಪು ಕುರಿತ ಮೇಲ್ಮನವಿ ಅರ್ಜಿಯನ್ನು ತುರ್ತಾಗಿ ನಡೆಸುವಂತೆ ವಿದ್ಯಾರ್ಥಿನಿ ಮನವಿಯನ್ನು ನಿರಾಕರಿಸಿರುವ ಸುಪ್ರೀಂ ಕೋರ್ಟ್ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಹೇಳಿದೆ.
ಮಾ.28ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಡುವುದಿಲ್ಲ, ಇದರಿಂದ ವಿದ್ಯಾರ್ಥಿನಿಯರು ಶೈಕ್ಷಣಿಕ ವರ್ಷವನ್ನೇ ಕಳೆದುಕೊಳ್ಳುತ್ತಾರೆ. ಹೀಗಾಗಿ ತುರ್ತಾಗಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ವಿದ್ಯಾರ್ಥಿನಿ ಐಶಾತ್ ಶಿಫಾ ಪರ ವಕೀಲರು ಮನವಿ ಮಾಡಿದ್ದರು. ಅಲ್ಲದೇ ಕರ್ನಾಟಕ ಹಿಜಾಬ್ ತೀರ್ಪು ಪ್ರಶ್ನಿಸಿ ಅರ್ಜಿದಾರ ವಿದ್ಯಾರ್ಥಿನಿ ಪರ ದೇವದತ್ ಕಾಮತ್ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು.
ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಸಿಜೆಐ ಎನ್.ವಿ.ರಮಣ, ಪರೀಕ್ಷೆಗೂ ಹಿಜಾಬ್ ಗೂ ಯಾವುದೇ ಸಂಬಂಧವಿಲ್ಲ, ಈ ವಿಷಯ ಅತಿರಂಜಿತಗೊಳಿಸುವುದು ಬೇಡ ಎಂದು ಹೇಳಿ ಹಿಜಾಬ್ ಕುರುತು ತುರ್ತು ವಿಚಾರಣೆ ನಿರಾಕರಿಸಿದ್ದಾರೆ.
ರಾಜ್ಯದ 7 ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ