NationalPolitics

*ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ಕಾಯ್ದಿರಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ : ದೆಹಲಿಯ ಅಬಕಾರಿ ನೀತಿ ಹಗರಣದ ಆರೋಪದಲ್ಲಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.

ಈಗಾಗಲೇಈ ಪ್ರಕರಣದಲ್ಲಿ ಇಡಿ ಬಂಧನದಿಂದ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್, ಸಿಬಿಐ ಕಸ್ಟಡಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸುರುವ ಸುಪ್ರೀಂ ಕೋರ್ಟ್, ತಿರ್ಪನ್ನು ಕಾಯ್ದಿರಿಸಿದೆ.

ಕಳೆದ ಆ.23ರಂದು ಸುಪ್ರೀಂ ಕೋರ್ಟ್ ಈ ಪ್ರಕರಣ ಸಂಬಂಧ ತನ್ನ ಪ್ರತಿವಾದ ಅಫಿಡವಿಟ್ ಸಲ್ಲಿಕೆಗೆ ಸಿಬಿಐಗೆ ಅನುಮತಿಯನ್ನು ನೀಡಿತ್ತು. ಪ್ರಕರಣದಲ್ಲಿ ಜಾಮೀನುನ್ನನ್ನು ನಿರಾಕರಿಸಿದ್ದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಒಟ್ಟು 2 ಅರ್ಜಿಯನ್ನು ಕೇಜ್ರಿವಾಲ್ ಸಲ್ಲಿಸಿದ್ದರು. ಕಳೆದ ಜೂ.26ರಂದು ಸಿಬಿಐ ಕೇಜ್ರಿವಾಲ್ ರನ್ನು ಅರೆಸ್ಟ್ ಮಾಡಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button