Kannada NewsLatestNational

*ಮತಾಂತರಗೊಂಡರೆ ಎಸ್ ಸಿ, ಎಸ್ ಟಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು*

ಪ್ರಗತಿವಾಹಿನಿ ಸುದ್ದಿ: ಮತಂತರಗೊಂಡರೆ ಎಸ್ ಸಿ ಎಸ್ ಸಿ ಸ್ಥಾನಮಾನ ರದ್ದುಗೊಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು ಮತ್ತು ಕ್ರಿಶ್ಚಿಯನ್ ಧರ್ಮದಂತಹ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡರೆ ಆ ವ್ಯಕ್ತಿ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾನೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (ಎಸ್‌ಸಿ,ಎಸ್‌ಟಿ ಕಾಯ್ದೆ)ಯಡಿ ರಕ್ಷಣೆ ಕೇಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಮತ್ತು ಮನಮೋಹನ್ ಅವರ ಪೀಠವು ತೀರ್ಪು ನೀಡಿದೆ.

Home add -Advt

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿ ಪರಿಶಿಷ್ಟ ಜಾತಿಯ ಸದಸ್ಯರಾಗಿರುವುದಿಲ್ಲ. ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿಯ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಆಂಧ್ರಪ್ರದೇಶ ಹೈಕೋರ್ಟ್‌ನ ಮೇ 2025 ರ ತೀರ್ಪಿನ ವಿರುದ್ಧ ಚಿಂತಾಡ ಆನಂದ್ ಎಂಬ ಪಾದ್ರಿ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಈ ತೀರ್ಪು ನೀಡಲಾಗಿದೆ.

Related Articles

Back to top button