*ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ*: *ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಸುಪ್ರೀಂ ತಿರುವು*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಆರೋಪ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ನಿರ್ದೇಶನಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಪ್ರಕರಣದ ವಿಚಾರಣೆಯಲ್ಲೇ ಈಗ ಹೊಸ ಬದಲಾವಣೆಗೆ ಸೂಚನೆ ನೀಡಿದೆ. ಅರ್ಜಿಯ ವಿಚಾರಣೆಯನ್ನು ಮತ್ತೊಮ್ಮೆ ಆರಂಭಿಸುವಂತೆ ಹೈಕೋರ್ಟ್‌ಗೆ ನಿರ್ದೇಶಿಸಿರುವ ಸುಪ್ರೀಂ ಕೋರ್ಟ್, ರಾಹುಲ್ ಗಾಂಧಿ ಅವರ ವಾದ ಆಲಿಸುವುದನ್ನೂ ಕಡ್ಡಾಯಗೊಳಿಸಿದೆ. ಆದಾಯದ ಮೂಲಗಳಿಗೆ … Continue reading *ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ*: *ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಸುಪ್ರೀಂ ತಿರುವು*