Kannada NewsLatestNational
*ನನಗೆ ಯಾವುದೇ ಪಶ್ಚಾತ್ತಾಪವಿಲ್ಲ; ನನ್ನ ನಿರ್ಧಾರ ಸರಿಯಿದೆ ಎಂದ ಸುಪ್ರೀಂ ಕೋರ್ಟ್ ಸಿಜೆಐ ಮೇಲೆ ಶೂ ಎಸೆದ ವಕೀಲ*

ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ಸಿಜೆಐ ಬಿ.ಎರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ನಿರ್ಧಾರ ಸರಿಯಿದೆ ಎಂದು ವಕೀಲ ರಾಕೇಶ್ ಕಿಶೋರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ವಕೀಲ ರಾಕೇಶ್ ಕಿಶೋರ್, ನಾನು ಜೈಲುಶಿಕ್ಷೆ ಅನುಭವಿಸಲು ಸಿದ್ಧ. ಈ ಘಟನೆ ಬಗ್ಗೆ ನಾನು ಕ್ಷಮೆ ಕೇಳಲ್ಲ ಎಂದಿದ್ದಾರೆ. ಅಲ್ಲದೇ ನಾನು ಯಾವುದೇ ರಾಜಕೀಯ ಪಕ್ಷದ ಜೊತೆ ಸಂಬಂಧ ಹೊಂದಿಲ್ಲ ಎಂದಿದ್ದಾರೆ.
ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾರೆ. ಖಜರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ.ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆ ಬಂದಿಲ್ಲ. ಬಳಿಕ ಮಾರಿಷಸ್ ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆ ಹೊರತು ಬುಲ್ಡೋಜರ್ ನಿಯಮಗಳಿಂದ ಅಲ್ಲ ಎಂದು ಗವಾಯಿ ಹೇಳಿಕೆ ನೀಡಿದ್ದು ನನಗೆ ಅಸಮಾಧಾನವಾಗಿತ್ತು ಎಂದು ತಿಳಿಸಿದ್ದಾರೆ.