National

*ಪೊಲೀಸರು ವಾಟ್ಸಾಪ್, ಎಲೆಕ್ಟ್ರಿಕ್ ಸಾಧನದ ಮೂಲಕ ನೋಟಿಸ್ ನೀಡುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ*

ಪ್ರಗತಿವಾಹಿನಿ ಸುದ್ದಿ: ಪೊಲೀಸರು ಆರೋಪಿಗಳಿಗೆ ವಾಟ್ಸಾಪ್ ಅಥವಾ ಇತರೆ ಎಲೆಕ್ಟ್ರಿಕ್ ಸಾಧನಗಳ ಮೂಲಕ ನೋಟಿಸ್ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ವಾಟ್ಸಾಪ್ ಅಥವಾ ಎಲೆಕ್ಟ್ರಿಕ್ ಸಾಧನಗಳನ್ನು ಬಳಸಿ ಪೊಲೀಸರು ನೀಡುವ ನೋಟಿಸ್ ಸೇವೆ ಕ್ರಿಮಿನಲ್ ಪ್ರೊಸಿಜರ್ ಕೋಡ್ (ಅಪರಾಧ ಪ್ರಕ್ರಿಯಾ ಸಂಹಿತೆ) ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ವಕೀಲ ಸತೇಂದರ್ ಕುಮಾರ್ ಆಂಟಿಲ್ ಪ್ರಕರಣದಲ್ಲಿ ನ್ಯಾಯಾಲಯವು ವಾಟ್ಸಪ್ ಅಥವಾ ಇತರ ಎಲೆಖ್ರಾನಿಕ್ ಸಾಧನಗಳ ಮೂಲಕ ಕಳುಹಿಸಲಾದ ನೋಟಿಸ್ ನ್ನು ಸೇವಾ ವಿಧಾನವೆಂದು ಪರಿಗಣಿಸುವುದಿಲ್ಲ ಎಂದು ದೆಹಲಿ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button