
ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹಾಗೂ ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ಮಂಗಳವಾರ ರಾತ್ರಿ ದೆಹಲಿಯಲ್ಲಿ ಫಾಲಿ ನಾರಿಮನ್ ನಿಧನರಾಗಿದ್ದಾರೆ. 1971ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದರು. 1972-75ವರೆಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು.
ಫಾಲಿ ನಾರಿಮನ್ ಅವರಿಗೆ 1991ರಲ್ಲಿ ಪದ್ಮಭೂಷಣ, 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಲಾಗಿತ್ತು. 1999-2005ವರೆಗೆ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಫಾಲಿ ನಾರಿಮನ್ ಜಲವಿವಾದಗಳಲ್ಲಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಂಡಿಸಿ ಹಲವು ವ್ಯಾಜ್ಯಗಳಲ್ಲಿ ಜಯ ತಂದು ಕೊಟ್ಟಿದ್ದರು. ಸುಪ್ರೀಂ ಕೋರ್ಟ್ ಹಿರಿಯ ವಕೀಲ ನಾರಿಮನ್ ನಿಧನಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ