*ಸುಪ್ರೀಂ ಕೋರ್ಟ್ ಹಿರಿಯ ವಕೀಲ ಫಾಲಿ ನಾರಿಮನ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹಾಗೂ ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಮಂಗಳವಾರ ರಾತ್ರಿ ದೆಹಲಿಯಲ್ಲಿ ಫಾಲಿ ನಾರಿಮನ್ ನಿಧನರಾಗಿದ್ದಾರೆ. 1971ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದರು. 1972-75ವರೆಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ಫಾಲಿ ನಾರಿಮನ್ ಅವರಿಗೆ 1991ರಲ್ಲಿ ಪದ್ಮಭೂಷಣ, 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಲಾಗಿತ್ತು. 1999-2005ವರೆಗೆ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಫಾಲಿ ನಾರಿಮನ್ ಜಲವಿವಾದಗಳಲ್ಲಿ ಕರ್ನಾಟಕದ … Continue reading *ಸುಪ್ರೀಂ ಕೋರ್ಟ್ ಹಿರಿಯ ವಕೀಲ ಫಾಲಿ ನಾರಿಮನ್ ಇನ್ನಿಲ್ಲ*