ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪೆಗಾಸಸ್ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿರುವ ಸುಪ್ರೀಂ ಕೋರ್ಟ್, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತಜ್ಞರ ಸಮಿತಿ ರಚಿಸಿದೆ.
ಪೆಗಾಸಸ್ ವಿರುದ್ಧದ ಅರ್ಜಿ ತಿರಸ್ಕರಿಸಬೇಕು ಎಂಬ ಕೇಂದ್ರ ಸರ್ಕಾರದ ವಾದ ಒಪ್ಪದ ಸುಪ್ರೀಂ ಕೋರ್ಟ್ ಪೆಗಾಸಸ್ ಗೂಢಚಾರಿಕೆ ಪ್ರಕರಣ ಸಂಬಂಧ ತನಿಖೆಗೆ ಸಮಿತಿ ರಚನೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಖಾಸಗಿ ತನದ ರಕ್ಷಣೆ ನೀಡಬೇಕು. ನಾವು ಮಹಿತಿ ಯುಗದಲ್ಲಿ ಬದುಕುತ್ತಿದ್ದು, ಶಾಸನದ ಮಾನ್ಯತೆ ಇಲ್ಲದೇ ಖಾಸಗಿತನದ ಹಕ್ಕಿನಲ್ಲಿ ಮೂಗು ತೂರಿಸುವಿಕೆಗೆ ಅವಕಾಶವಿಲ್ಲ. ದೇಶದ ಜನತೆಗೆ ತಮ್ಮ ಗೌಪ್ಯತೆ ಕಾಪಾಡಿಕೊಳ್ಳುವ ಹಕ್ಕಿದೆ ಎಂದು ಹೇಳಿದೆ.
ಪೆಗಾಸಸ್ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಆರ್.ವಿ.ರವೀದ್ರನ್ ನೇತೃತ್ವದಲ್ಲಿ ಮೂವರ ತಂಡ ರಚಿಸಲಾಗಿದ್ದು, ತನಿಖೆಗೆ ಸಹಕರಿಸಬೇಕು ಎಂದು ಕೇಂದ್ರಕ್ಕೆ ಸೂಚನೆ ನೀಡಿದೆ.
ರಾಜಕಾರಣಿಗಳು, ಉದ್ಯಮಿಗಳು, ಸೆಲೆಬ್ರಿಟಿಗಳು, ಪತ್ರಕರ್ತರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಸುದ್ದಿ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದರ ಹಿಂದೆ ಸ್ವತ: ಕೇಂದ್ರ ಸರ್ಕಾರದ ಕೈವಾಡವಿರುವುದಾಗಿ ವಿಪಕ್ಷಗಳು ಆರೋಪಿಸಿದ್ದವು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಉಪಚುನಾವಣೆ ಬಳಿಕ ಸಂಪುಟಕ್ಕೆ ಮೇಜರ್ ಸರ್ಜರಿ; ಸಚಿವ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ