Latest

ವೇಶ್ಯಾವಾಟಿಕೆ ಕಾನೂನುಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವೇಶ್ಯಾವಾಟಿಕೆ ಕಾನೂನುಬದ್ಧ ವೃತ್ತಿಯಾಗಿದ್ದು, ಲೈಂಗಿಕ ಕಾರ್ಯಕರ್ತೆಯರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಅವರ ವೃತ್ತಿಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಕಿರುಕುಳ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸ್ವಯಂ ಸಮ್ಮತಿಯೊಂದಿಗೆ ವೇಶ್ಯಾ ವೃತ್ತಿಯಲ್ಲಿ ನಿರತವಾಗಿರುವವರ ವಿಚಾರದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಅಥವಾ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಆದೇಶದಲ್ಲಿ ಪೊಲೀಸರಿಗೆ ಕೋರ್ಟ್ ಸೂಚಿಸಿದೆ.

ಲೈಂಗಿಕ ಕಾರ್ಯಕರ್ತೆ ವಯಸ್ಕರಾಗಿದ್ದು ಸ್ವಪ್ರೇರಣೆಯಿಂದ ಆ ಚಟುವಟಿಕೆಯಲ್ಲಿ ತೊಡಗಿದ್ದರೆ ಪೊಲೀಸರು ಅಂಥವರ ವಿರುದ್ಧ ಯಾವುದೇ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಪೀಠ ತಾಕೀತು ಮಾಡಿದೆ.

ವೃತ್ತಿ ತಾರತಮ್ಯವಿಲ್ಲದೆ ದೇಶದ ಪ್ರತಿಯೊಬ್ಬರಿಗೂ ಗೌರವಯುತ ಬಾಳ್ವೆ ನಡೆಸುವ ಹಕ್ಕನ್ನು ಸಂವಿಧಾನದ 21ನೇ ಆರ್ಟಿಕಲ್ ಒದಗಿಸಿದೆ. ವೇಶ್ಯಾವಾಟಿಕೆಗಳ ಮೇಲೆ ದಾಳಿ ಮಾಡಿ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಬಾರದು, ಕಿರುಕುಳ ನೀಡಬಾರದು, ಶಿಕ್ಷಿಸಬಾರದು ಎಂದು ಕೋರ್ಟ್ ಹೇಳಿದೆ. ವೇಶ್ಯಾವಾಟಿಕೆ ದಂಧೆ ನಡೆಸುವುದು ಮಾತ್ರ ಅಪರಾಧ ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button