ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನದಿ ನೀರು ವಿಚರವಾಗಿ ರಾಜ್ಯಕ್ಕೆ ಮತ್ತೊಮ್ಮೆ ಬಿಗ್ ಶಾಕ್. ಸುಪ್ರೀಂ ಕೋರ್ಟ್ ನಲ್ಲಿಯೂ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಪ್ರತಿದಿನ 5000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ನ್ಯಾಯಾಲಯ ಸೂಚಿಸಿದೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಅಲ್ಲದೇ ಕಾವೇರಿ ನದಿ ನೀರಿನ ವಿಚಾರವಾಗಿ ಎರಡೂ ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲೀಸಬೇಕು ಎಂದು ತಾಕೀತು ಮಾಡಿದೆ.
ತಮಿಳುನಾಡಿಗೆ ಪ್ರತಿದಿನ 5ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಧಿಕಾರ (CWMA)ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.ಅಲ್ಲದೇ ರಾಜ್ಯದಲ್ಲಿ ಮಳೆ ಕೊರತೆಯಿಂದ ಕೆಆರ್ ಎಸ್ ನಲ್ಲಿ ನೀರು ಡೆಡ್ ಸ್ಟೋರೆಜ್ ಹಂತ ತಲುಪಿದೆ. ನಮಗೆ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಪರ ವಕೀಲರು ವದಿಸಿದ್ದರು. ಆದಾಗ್ಯೂ ಸುಪ್ರೀಂ ಕೋರ್ಟ್ CWMA ಆದೇಶವನ್ನು ಕರ್ನಾಟಕ ಪಾಲಿಸಲೇಬೇಕು. ಇನ್ನೂ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಸೂಚಿಸಿ ಆದೇಶ ನೀಡಿದೆ.
ಸುಪ್ರೀಂ ಕೋರ್ತ್ ಆದೇಶ ಬೆನ್ನಲ್ಲೇ ರಾಜ್ಯದಲ್ಲಿ ಕಾವೇರಿ ನದಿ ನೀರಿಗಾಗಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಈಗಾಗಲೇ ಮಂಡ್ಯ, ಮೈಸೂರು, ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆ, ರೈತರು ಪ್ರತಿಭಟನೆ ಆರಂಭಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ