Politics

*ಸೂರಜ್ ರೇವಣ್ಣ ಬಂಧನದ ಬಗ್ಗೆ ಹೆಚ್.ಡಿ.ರೇವಣ್ಣ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಬಂಧನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಮೌನ ಮುರಿದಿದ್ದು, ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ನಡೆದಿದೆ ಎಂದಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ನನ್ನ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದೆ. ಷಡ್ಯಂತ್ರ ಯಾರು ಮಾಡುತ್ತಿದ್ದಾರೆ ಎಂಬುದು ಗೊತ್ತಾಗಲಿದೆ. ಯಾವ ಷಡ್ಯಂತ್ರಕ್ಕೂ ನಾನು ಹೆದರಲ್ಲ. ನನಗೆ ದೇವರ ಮೇಲೆ, ನ್ಯಾಯಾಂಗದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಯುವಕನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿ, ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ನನ್ನು ವಿಚಾರಣೆ ನಡೆಸಿ, ಪೊಲೀಸರು ಬಂಧಿಸಿದ್ದಾರೆ.

ಇನ್ನು ಸಂತ್ರಸ್ತ ಯುವಕನ ವಿರುದ್ಧವೂ ಸೂರಜ್ ರೇವಣ್ಣ ಆಪ್ತ ದೂರು ದಾಖಲಿಸಿದ್ದು, ಬೆದರಿಕೆ ಹಾಕಿ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಪ್ರಕರಣ ದಾಖಲಿಸಿದ್ದಾರೆ.


Related Articles

Back to top button